ಚಿಕ್ಕಬಳ್ಳಾಪುರ : ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಬಾಗೇಪಲ್ಲಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್ ನಡೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದೆ ಎಂಬ ಚರ್ಚೆಗೆ ಕಾರಣವಾಗಿದೆ. 2023ರ ವಿಧಾನಸಭಾ ಚುನಾವಣೆಗೆ ಬಾಗೇಪಲ್ಲಿ ಕ್ಷೇತ್ರದಿಂದ ಜೆಡಿಎಸ್ ಪ್ರಭಾವಿ ನಾಯಕ ಡಿ.ಜೆ.ನಾಗರಾಜ್ ರೆಡ್ಡಿ ಹೆಸರನ್ನು ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರ ಎದುರು ಘೋಷಿಸಿದ್ದಾರೆ. ಇತ್ತೀಚೆಗೆ ಕ್ಷೇತ್ರಕ್ಕೆ ಭೇಟಿ ನೀಡಿದ ಕುಮಾರಸ್ವಾಮಿಯವರನ್ನು