ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆಯ ಕಾರ್ಯ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದಬಸ್ತ್ ಏರ್ಪಡಿಸಲಾಗಿದೆ. ಆರಂಭಿಕ ಹಂತದಲ್ಲಿ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. 90 ವಿಧಾನಸಭಾ ಕ್ಷೇತ್ರಗಳನ್ನು