ಶ್ರೀನಗರ : ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ. ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆಗಳು ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳ