ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉಪಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರ ಮೇಲೆ ತೃಣ ಮೂಲ ಕಾಂಗ್ರೆಸ್ ಕಾರ್ಯಕರ್ತರು ಕಾಲಿನಿಂದ ಒದ್ದು ಹಲ್ಲೆ ಮಾಡಿದ ಘಟನೆ ನಾಡಿಯಾ ಜಿಲ್ಲೆಯ ಘಿಯಾಘಾಟ್ ನ ಇಸ್ಲಾಂಪುರ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವರು ಮತದಾನದ ವೇಳೆ ಮತದಾರರನ್ನು ಓಲೈಸಲು ಇಸ್ಲಾಂಪುರ ಪ್ರಾಥಮಿಕ ಶಾಲೆಯಲ್ಲಿ ಆಹಾರ ತಯಾರಿಸುತ್ತಿದ್ದರು ಎಂಬ ವಿಚಾರ ತಿಳಿದು ಕರಿಂಪೂರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ