ನವದೆಹಲಿ : ಮಾರ್ಚ್ 19 ರಂದು ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಎದುರು ಖಲಿಸ್ತಾನಿ ಬೆಂಬಲಿಗರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ, ಯುಎಪಿಎ ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ದೆಹಲಿ ಪೊಲೀಸರಿಗೆ ಸೂಚಿಸಿದ್ದು, ಈ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.ದೆಹಲಿ ಪೊಲೀಸರ ವಿಶೇಷ ತಂಡ ಈ ಪ್ರಕರಣದ ತನಿಖೆಯನ್ನು