ನವದೆಹಲಿ : ಆಗಸ್ಟ್ ತಿಂಗಳಿನಲ್ಲಿ 1,43,612 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹ ಶೇ. 28ರಷ್ಟು ಏರಿಕೆಯಾಗಿದೆ. ಕಳೆದ ಆಗಸ್ಟ್ನಲ್ಲಿ 1,12,020 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಸತತ 6ನೇ ಬಾರಿಗೆ ಜಿಎಸ್ಟಿ ಸಂಗ್ರಹ 1.40 ಲಕ್ಷ ಕೋಟಿ ರೂ. ಗಡಿ ದಾಟುತ್ತಿದೆ.ಜುಲೈನಲ್ಲಿ ಸಂಗ್ರಹವಾದ ಜಿಎಸ್ಟಿಗೆ ಹೋಲಿಸಿದರೆ ಆಗಸ್ಟ್ ಜಿಎಸ್ಟಿ