ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಮಹಿಳೆಯ ಪ್ರಜ್ಞೆ ತಪ್ಪಿಸಿ ದುಷ್ಕರ್ಮಿಗಳಿಬ್ಬರು ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರನಗರದಲ್ಲಿ ವರದಿಯಾಗಿದೆ. ಬರ್ಲಾ-ಬಸೆಡಾ ರಸ್ತೆಯಲ್ಲಿ ಮಹಿಳೆಗೆ ಮಾದಕ ವಸ್ತು ನೀಡಿ ಆಕೆಯ ಪ್ರಜ್ಞೆ ತಪ್ಪಿಸಿ, ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 28 ವರ್ಷದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಪಿಗಳ ಪತ್ತೆ ಪೊಲೀಸರು ಜಾಲ ಬೀಸಿದ್ದಾರೆ. ತಾಜಾ ಸುದ್ದಿಗಳನ್ನು