ನವದೆಹಲಿ: 1992 ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಕುರಿತು ಸಿಬಿಐನ ವಿಶೇಷ ನ್ಯಾಯಾಲಯ ಇಂದು ವಿಚಾರಣೆ ನಡೆಸಲಿದೆ. ಸೋಮವಾರ ಆರು ಮಂದಿ ಆಪಾದಿತರ ಪೈಕಿ ಸತೀಶ್ ಪ್ರಧಾನ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಿಚಾರಣೆಯನ್ನು ಮುಂದೂಡಲಾಗಿತ್ತು. ಮಂಗಳವಾರ ನ್ಯಾಯಾಧೀಶರು ಅಲಭ್ಯರಾಗಿದ್ದರಿಂದ ವಿಚಾರಣೆ ನಡೆಯಲಿಲ್ಲ.ಆರು ಮಂದಿ ಆಪಾದಿತರಲ್ಲದೆ, ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ವಿರುದ್ಧವೂ ವಿಚಾರಣೆ ನಡೆಯಲಿದೆ.