ನಾವೆಲ್ಲರೂ ಬೆಚ್ಚಗೆ ಮನೆಯೊಳಗೆ ಮಲಗಲು ಕಾರಣ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರು. ನಮಗಾಗಿ ತಮ್ಮ ಜೀವ, ಜೀವನವನ್ನೇ ಮುಡಿಪಾಗಿಡುವ ಸೈನಿಕರ ಬಗ್ಗೆ ಸ್ಪೋಟಕ ವಿಚಾರವೊಂದು ಬಯಲಾಗಿದೆ. ಯೋಧನೊಬ್ಬ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿರುವ ಸೆಲ್ಫಿ ವಿಡಿಯೋ ಒಂದು ಸೈನಿಕರ ದುಃಸ್ಥಿತಿಯನ್ನು ಬಿಚ್ಚಿಟ್ಟಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.