ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ದಾಖಲಾದ ಹಿನ್ನಲೆ; ಸಚಿವ ಸಂಪುಟ ಸಭೆ ಕರೆದ ಪ್ರಧಾನಿ ಮೋದಿ

ನವದೆಹಲಿ| pavithra| Last Modified ಬುಧವಾರ, 4 ಮಾರ್ಚ್ 2020 (10:45 IST)
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ದಾಖಲಾಗುತ್ತಿದ್ದ ಹಿನ್ನಲೆಯಲ್ಲಿ ಇಂದು ಕೇಂದ್ರದಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿದೆ.ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ 12ಕ್ಕೆ ಕೇಂದ್ರ ಆರೋಗ್ಯ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.


ಚೀನಾದಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾದ ಕೊರೊನಾ ಮಹಾಮಾರಿ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಈ ಬಗ್ಗೆ ಮುನ್ನೇಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :