ನವದೆಹಲಿ : ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-2 ಉಡಾವಣೆಯನ್ನು ರದ್ದುಗೊಳಿಸಲಾಗಿದೆ. ಉಪಗ್ರಹವನ್ನು ಭೂ ಕಕ್ಷೆಯಿಂದ ಚಂದ್ರನ ಮೇಲ್ಮೈಗೆ ಉಡಾಯಿಸುವ ಉದ್ದೇಶದಿಂದ ಚಂದ್ರಯಾನ-2 ಯೋಜನೆಗಾಗಿ ಇಸ್ರೋ GSLV Mk III (ಜಿಎಸ್ಎಲ್ವಿ ಎಂಕೆ 3) ಎಂಬ ಹೊಸ ಮಾದರಿಯ ನೂತನ ತಂತ್ರಜ್ಞಾನಗಳನ್ನು ಹೊಂದಿರುವ ರಾಕೆಟ್ ಒಂದನ್ನು ನಿರ್ಮಿಸಿದೆ. ಇದರ ಉಡಾವಣೆಗೆ 56 ನಿಮಿಷ 24 ಸೆಕೆಂಡ್ ಬಾಕಿ ಇರುವಾಗ ತಾಂತ್ರಿಕ ದೋಷ ಪತ್ತೆಯಾಗಿತ್ತು.ತಕ್ಷಣ ಉಡಾವಣೆಯನ್ನು