ಢಾಕಾ : ಸತತ ಸುರಿಯುತ್ತಿರುವ ಮುಂಗಾರು ಮಳೆಯಿಂದ ತತ್ತರಿಸಿರುವ ಬಾಂಗ್ಲಾದೇಶದಲ್ಲಿ 25 ಮಂದಿ ಸಾವನ್ನಪ್ಪಿದ್ದು, 40 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ತೀವ್ರ ಮಳೆಯ ಕಾರಣ ಬಾಂಗ್ಲಾ ದೇಶಾದ್ಯಂತ ಪ್ರೌಢಶಾಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲಾ ತರಗತಿ ಕೊಠಡಿಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ.ಕೆಲ ಹಳ್ಳಿಗಳು ಕೆಲ ಗಂಟೆಗಳಲ್ಲೇ ಮುಳುಗಿ ಹೋಗಿದ್ದು, ಶಾಲೆಗಳನ್ನೇ ಆಶ್ರಯತಾಣವಾಗಿ ಮಾಡಿಕೊಳ್ಳಲಾಗಿದೆ. ಕೆಲವರು ತಾತ್ಕಾಲಿಕ ದೋಣಿ ವ್ಯವಸ್ಥೆ ಮಾಡಿಕೊಂಡು ತಮ್ಮನ್ನು ತಾವು ರಕ್ಷಿಸಿಕೊಂಡರೆ,