ಮುಂಬೈ(ಆ.12): ಕರ್ನಾಟಕದೊಂದಿಗೆ ದಶಕಗಳ ಹಳೆಯ ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ಸಿಪಿ ನಾಯಕ ಅಜಿತ್ ಪವಾರ್ ಮನವಿ ಮಾಡಿದ್ದಾರೆ. ಈ ಕುರಿತು ಆ.9ರಂದು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಪವಾರ್ ‘ಮುಂಬೈಯನ್ನು ರಾಜಧಾನಿಯಾಗಿಸಿ ಮಹಾರಾಷ್ಟ್ರ ರಾಜ್ಯ ರಚನೆಯಾಗಿ 60ಕ್ಕಿಂತ ಹೆಚ್ಚಿನ ವರ್ಷಗಳೇ ಕಳೆದರೂ ಕರ್ನಾಟಕದಲ್ಲಿನ ಮರಾಠಿ ಭಾಷಿಕ ಪ್ರದೇಶಗಳಾದ ಬೆಳಗಾವಿ, ಕಾರವಾರ, ಬೀದರ್, ಭಾಲ್ಕಿ, ನಿಪ್ಪಾಣಿ ಮತ್ತು ಇತರೆ ಹಲವು