ಕೌಟಂಬಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಶಾಸಕ ಸೋಮನಾಥ್ ಭಾರ್ತಿ ಪೊಲೀಸರಿಗೆ ಶರಣಾಗುವುದು ಸೂಕ್ತ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ. ದೆಹಲಿ ಹೈಕೋರ್ಟ್ ಭಾರ್ತಿಯವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ನಂತರ ಕಾಣೆಯಾಗಿರುವ ಭಾರ್ತಿ, ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಕೇಜ್ರಿವಾಲ್ ತಮ್ಮ ಪಕ್ಷದ ಶಾಸಕನಿಗೆ ಕಿವಿಮಾತು ಹೇಳಿದ್ದಾರೆ. ಸೋಮನಾಥ್ ಭಾರ್ತಿ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿರುವ ಕೇಜ್ರಿವಾಲ್,