ಮುಜಾಫರ್ ನಗರ: ನೂರಾರು ಬೈಕ್ ಸವಾರಿಯ ಮೂಲಕ ರ್ಯಾಲಿಯನ್ನು ನಡೆಸಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಉತ್ತರಪ್ರದೇಶದ ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ರನ್ನು ಬಂಧಿಸುತ್ತಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿರುವುದರಿಂದ ಅಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ. ಚುನಾವಣಾ ಆಯೋಗದಿಂದ ನೀತಿ ಸಂಹಿತೆ ಘೋಷಣೆಯಾಗಿದ್ದರೂ ಸಹ ಮುಜಾಫರ್ ನಗರದ ಕಡೆಗೆ ಬೈಕ್