ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಜೆಡಿ ಕಾರ್ಯಕರ್ತರಿಂದ ಇಂದು ಬಿಹಾರ್ ಬಂದ್

ಬಿಹಾರ| pavithra| Last Modified ಶನಿವಾರ, 21 ಡಿಸೆಂಬರ್ 2019 (11:25 IST)
: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಜೆಡಿ ಕಾರ್ಯಕರ್ತರು ಇಂದು ಬಿಹಾರ್ ಬಂದ್ ಗೆ ಕರೆ ನೀಡಿದ್ದಾರೆ.ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅನೇಕ ಸಾವು ನೋವುಗಳು ಸಂಭವಿಸಿದೆ. ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಲಾಗುತ್ತಿದೆ. ಆದಕಾರಣ ದೇಶದ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.


ಅದೇರೀತಿ ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಪಾಟ್ನಾ ಸೇರಿ ವಿವಿಧೆಡೆ ಆರ್ ಜೆಡಿ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ. ಹೆದ್ದಾರಿ ತಡೆದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲು ತಡೆದು ಬ್ಯಾನರ್ ಕಟ್ಟಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :