ಬಿಹಾರದ ಜೆಡಿಯು ಮತ್ತು ಆರ್`ಜೆಡಿ ನಡುವಿನ ಮಹಾಮೈತ್ರಿ ಮುರಿದು ಬಿದ್ದಿದೆ. ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.ಭ್ರಷ್ಟಾಚಾರ ಆರೋಪದಲ್ಲಿ ಸಿಲುಕಿರುವ ಲಾಲೂ ಪ್ರಸಾದ್ ಯಾದವ್ ಪುತ್ರ ಡಿಸಿಎಂ ತೇಜಸ್ವಿ ಯಾದವ್ ರಾಜೀನಾಮೆಗೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಳಂಕರಹಿತ ರಾಜಕಾರಣಕ್ಕೆ ಹೆಸರಾಗಿರುವ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿಯಿಂದ ಹೊರ ಬಂದಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್ ಕುಮಾರ್, ಬಿಹಾರ ರಾಜ್ಯದ ಅಭಿವೃದ್ಧಿಗೆ