ಪಾಟ್ನಾ : ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ಪಕ್ಷವು ಕನ್ನಡಿಗ ಹಾಗೂ ಉಡುಪಿ ಮೂಲದ ಅನಿಲ್ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ.ಮೂಲತಃ ಮಂಗಳೂರಿನವರಾಗಿದ್ದ ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು. ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇದೀಗ ಜೆಡಿಯು ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್ 27 ರಂದು ಜನತಾ