ಬೆಂಗಳೂರು : ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಎರಡು ಉಪಚುನಾವಣೆಗೂ ಪಕ್ಷದಿಂದ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದೇವೆ. ಎರಡು ಕ್ಷೇತ್ರದಲ್ಲೂ ಪ್ರತ್ಯೇಕ ಸಭೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸೋಮವಾರ(ಅಕ್ಟೋಬರ್-3) ನಡೆಯಲಿರುವ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದ್ದೇವೆ. ಅಲ್ಲಿಂದಲೇ ಅಂತಿಮ