ಅಗರ್ತಲಾ : 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರತಿ ಸ್ಪರ್ಧಿಯೇ ಇಲ್ಲ. ದೇಶದ ಜನತೆ ಪೂರ್ಣ ಹೃದಯದಿಂದ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ. ಅವರು ಯಾವುದೇ ಪಕ್ಷಕ್ಕೆ ವಿರೋಧ ಪಕ್ಷದ ಹಣೆಪಟ್ಟಿ ನೀಡಿಲ್ಲ ಎಂದು ತಿಳಿಸಿದ್ದಾರೆ. ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ