ನವದೆಹಲಿ : ಚುನಾವಣೋತ್ತರ ಸಮೀಕ್ಷೆಗಳಿಗೆ ಪೂರಕವಾಗಿಯೇ ಈಶಾನ್ಯ ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು, ತ್ರಿಪುರ, ನಾಗಲ್ಯಾಂಡ್ನಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ. ಮೇಘಾಲಯದಲ್ಲಿ ಮಾತ್ರ ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್ಪಿಪಿ ಹೆಚ್ಚು ಸ್ಥಾನ ಗಳಿಸಿದರೂ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಕಾನ್ರಾಡ್ ಅವರು ಬೆಂಬಲ ಪಡೆಯಲು ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿ ಈ ವಿಚಾರ