ಲಕ್ನೋ : ಫಾರ್ಮ್ಹೌಸ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೇಘಾಲಯದ ಉಪಾಧ್ಯಕ್ಷ ಬೆರ್ನಾಡ್ ಎನ್ ಮರಕ್ ಅವರನ್ನು ಉತ್ತರಪ್ರದೇಶದಲ್ಲಿ ಬಂಧಿಸಲಾಗಿದೆ.ಶನಿವಾರ ಪೊಲೀಸರು ನಡೆಸಿದ ದಾಳಿಯಲ್ಲಿ ಮರಕ್ ಅವರ ಫಾರ್ಮ್ಹೌಸ್ನಿಂದ 6 ಅಪ್ರಾಪ್ತರನ್ನು ರಕ್ಷಿಸಿ, 73 ಜನರನ್ನು ಬಂಧಿಸಲಾಗಿತ್ತು. ಘಟನೆಯ ಬೆನ್ನಲ್ಲೇ ಮರಕ್ ಪರಾರಿಯಾಗಿದ್ದರು. ಅವರನ್ನು ತನಿಖೆಗೆ ಸಹಕರಿಸುವಂತೆ ಕೇಳಿಕೊಳ್ಳಲಾಯಿತಾದರೂ ತನಿಖಾಧಿಕಾರಿಗಳಿಂದ ಅವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.ಸೋಮವಾರ ತುರಾ ನ್ಯಾಯಾಲಯ ಮರಕ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.