ಗೋವು ರಕ್ಷಣೆಯ ನೆಪದಲ್ಲಿ ಬಿಜೆಪಿ ನಾಯಕರು ಕೊಲೆಗಡುಕರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಗೋವು ರಕ್ಷಣೆಯ ನೆಪದಲ್ಲಿ ಹತ್ಯೆಗಳನ್ನು ಎಸಗುತ್ತಿದ್ದಾರೆ. ಇದರಲ್ಲಿ ಬಿಜೆಪಿ ಸಂಪರ್ಕದಲ್ಲಿರುವ ಭಜರಂಗದಳ ಸೇರಿದಂತೆ ಸಂಘಟನೆಗಳು ಭಾಗಿಯಾಗಿವೆ ಎಂದು ಆರೋಪಿಸಿದರು. 70 ವರ್ಷಗಳ ಇತಿಹಾಸದಲ್ಲಿ ಇಂತಹ ಘಟನೆಗಳು ನಡೆದಿರಲಿಲ್ಲ.ಆದರೆ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನೇತೃತ್ವದ