ನವದೆಹಲಿ : ಸಿಎಂ ಯಡಿಯೂರಪ್ಪ ನನಗೆ ಮಂತ್ರಿ ಸ್ಥಾನ ಕೊಟ್ಟೆ ಕೊಡುತ್ತಾರೆ ಎಂದು ಶಾಸಕ ಉಮೇಶ್ ಕತ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದ ಉಮೇಶ್ ಕತ್ತಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ. ಹೀಗಾಗಿ ನನಗೆ ಮಂತ್ರಿ ಸ್ಥಾನ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಕರ್ನಾಟಕದಲ್ಲಿ ಬೆಳಗಾವಿ ವಿಶೇಷವಾದ ಜಿಲ್ಲೆ. ಜಿಲ್ಲೆಗೆ ಹೆಚ್ಚು ಸಚಿವ ಸ್ಥಾನ