ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಪಕ್ಷದ ನಾಯಕರು ಕಟುವಾದ ಮಾತುಕತೆಗಳು ಮತ್ತು ಅನಗತ್ಯ ಹೇಳಿಕೆಗಳನ್ನು ನೀಡದಂತೆ ತಾಕೀತು ಮಾಡಿದ್ದರೂ, ಬಿಜೆಪಿ ಶಾಸಕರೊಬ್ಬರು ಸಾಮಾಜಿಕ ತಾಣಗಳಲ್ಲಿ ಅಮರನಾಥ್ ಯಾತ್ರೆಯಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪ್ರಸ್ತಾಪಿಸಿ, ಹಜ್ ಯಾತ್ರಿಗಳಿಗೆ ಬೆದರಿಕೆಯೊಡ್ಡಿದ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.