ನವದೆಹಲಿ : ವಿರೋಧ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದರೆ ಇನ್ನೊಂದು ಕಡೆಯಲ್ಲಿ ಬಿಜೆಪಿ ಸಂಘಟನಾ ಅನುಕೂಲಕ್ಕಾಗಿ ಮೂರು ವಲಯಗಳನ್ನಾಗಿ ವಿಂಗಡಿಸಿ ಸಭೆ ನಡೆಸಲು ಮುಂದಾಗಿದೆ. ಉತ್ತರ, ದಕ್ಷಿಣ ಮತ್ತು ಪೂರ್ವ ವಲಯಗಳನ್ನು ಗುರುತಿಸಲಾಗಿದ್ದು ಈ ಪ್ರದೇಶಗಳ ಪ್ರತ್ಯೇಕ ಸಭೆಗಳು ಜುಲೈ 6, 7 ಮತ್ತು 8 ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.ಜಮ್ಮು-ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಚಂಡೀಗಢ, ರಾಜಸ್ಥಾನ,