ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮತ್ತೆ ಎರಡು ದಿನಗಳ ಕಾಲ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 29ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಅಮಿತ್ ಷಾ ಬಂದಿಳಿಯಲಿದ್ದಾರೆ. ಮಾರ್ಚ್ 30ರಂದು ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠಾಧಿಪತಿಗಳಾಗಿರುವ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಜೊತೆ ಉಭಯಕುಶಲೋಪರಿ ನಡೆಸಿ ಆಶೀರ್ವಚನ ಪಡೆದುಕೊಳ್ಳಲಿದ್ದಾರೆ. ಬಳಿಕ ಮೈಸೂರು ಅರಮನೆಯಲ್ಲಿರುವ ರಾಜಮನೆತನದ ಖಾಸಗಿ ನಿವಾಸಕ್ಕೆ ತೆರಳಿ ಪ್ರಮೋದಾದೇವಿ