ಬಿಹಾರ್ ವಿಧಾನಸಭೆ ಚುನಾವಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನುವ ಆತಂಕದಿಂದಾಗಿ ಜಾತಿ ಆಧಾರಿತ ಮೀಸಲಾತಿ ಪರಿಷ್ಕರಣ ನಡೆಸುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸಲಹೆಯನ್ನು ಬಿಜೆಪಿ ತಿರಸ್ಕರಿಸಿದೆ. ಚುನಾವಣೆ ಸಂದರ್ಭದಲ್ಲಿ ಮೇಲ್ಜಾತಿ ಮತ್ತು ಕೀಳುಜಾತಿಗಳ ಮಧ್ಯದ ಸಂಘರ್ಷಕ್ಕೆ ಕಾರಣವಾಗುತ್ತದೆ ಮೀಸಲಾತಿ ನೀತಿಯನ್ನು ಪರಿಷ್ಕರಿಸುವ ಬಗ್ಗೆ ಬಿಜೆಪಿ ಒಲವು ಹೊಂದಿಲ್ಲವೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಭಾಗವತ್ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಪಷ್ಟನೆ