ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ನಾಯಕ ಹಾಗೂ ಅವರ ಸಹೋದರರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗುರುವಾರ ರಾತ್ರಿ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಹಾಗೂ ಸಹೋದರ ಅಜಿತ್ ಉಗ್ರರ ಗುಂಡಿಗೆ ಬಲಿಯಾದ ದುರ್ದೈವಿಗಳು. ಇವರಿಬ್ಬರು ರಾತ್ರಿ ತಮ್ಮ ಅಂಗಡಿಯನ್ನು ಮುಚ್ಚಿ ತಮ್ಮ ವಾಹನದಲ್ಲಿ ಮನೆಗೆ ಬರುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.