ಪಣಜಿ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದೇ ಸಾಕ್ಷಿ. ಗೋವಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಹೊಂದಿದ್ದರೂ, ಸರ್ಕಾರ ರಚನೆಯ ಹಕ್ಕು ಬಿಜೆಪಿ ಪಾಲಾಗಲಿದ್ದು, ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಲಿದ್ದಾರೆ. 13 ಸ್ಥಾನದಲ್ಲಿರುವ ಬಿಜೆಪಿ 10 ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚನೆ ಮಾಡಲಿದ್ದು, 17 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂರಬೇಕಾದ ಪರಿಸ್ಥಿತಿ ಎದುರಾಗಿದೆ. ಎರಡೂ ಪಕ್ಷಗಳಿಗೂ ಬಹುಮತ ಸಾಬೀತಿಗೆ ಪಕ್ಷೇತರರ ಸಹಾಯ ಬೇಕಾಗಿತ್ತು.