‘ಅಪ್ಪುಗೆ’ ಎಪಿಸೋಡ್ ಬೆನ್ನಲ್ಲೇ ರಾಹುಲ್ ಗಾಂಧಿಗೆ ಬಿಜೆಪಿ ಶಾಕ್

ನವದೆಹಲಿ| Krishnaveni K| Last Modified ಶುಕ್ರವಾರ, 20 ಜುಲೈ 2018 (16:17 IST)
ನವದೆಹಲಿ: ಪ್ರಧಾನಿ ಮೋದಿಯನ್ನು ಸಂಸತ್ತಿನಲ್ಲಿ ಅಪ್ಪಿಕೊಂಡು ಚಮಕ್ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಶಾಕ್ ನೀಡಲು ಬಿಜೆಪಿ ನಿರ್ಧರಿಸಿದೆ.


ಸಂಸತ್ತಿನಲ್ಲಿ ಅವಿಶ್ವಾಸ ಮಂಡನೆಗೆ ಸಂಬಂಧಿಸಿದಂತೆ ಚರ್ಚೆಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ ಕೇಂದ್ರ ಸಚಿವರ ವಿರುದ್ಧ ಆಧಾರ ರಹಿತವಾಗಿ ಗಂಭೀರ ಆರೋಪಗಳನ್ನು ಹೊರಿಸಿದ್ದಕ್ಕೆ ಅವರ ವಿರುದ್ಧ ಹಕ್ಕು ಚ್ಯುತಿ ಮಂಡಿಸಲು ತೀರ್ಮಾನಿಸಿರುವುದಾಗಿ ಬಿಜೆಪಿ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಹೇಳಿದ್ದಾರೆ.


ರಾಹುಲ್ ಗಾಂಧಿ ಅಪ್ಪುಗೆಯ ಬಗ್ಗೆಯೂ ಪ್ರಸ್ತಾಪಿಸಿರುವ ಅನಂತ ಕುಮಾರ್, ರಾಹುಲ್ ಗೆ ವಯಸ್ಸಾದರೂ ಇನ್ನೂ ಮಕ್ಕಳಂತೆ ಆಡುವುದನ್ನು ಬಿಟ್ಟಿಲ್ಲ. ಅವರಿಗೆ ವಯಸ್ಸಾಗಿದೆಯೇ ಹೊರತು ಗಾಂಭೀರ್ಯತೆ ಬಂದಿಲ್ಲ ಎಂದು ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :