ಬೆಂಗಳೂರು, (ಸೆ 02) : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದು ಹಣ ಸಂಗ್ರಹಕ್ಕೆ ಮಾತ್ರ. ಹಣ ವಸೂಲಿಗಾಗಿ ಅವರು ಆಗಾಗ್ಗೆ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದರು. ಕರ್ನಾಟಕ ಬಿಜೆಪಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದೆ. ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ, ಇದು ಅವರ ಪಕ್ಷದ ಸಂಸ್ಕೃತಿಯೂ ಹೌದು ಎಂದು ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.