ಹೈದರಾಬಾದ್ : ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಲೆ ಶುರುವಾಗಿದ್ದು, ಇಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ನರೇಂದ್ರಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿಂದು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಟಿಆರ್ಎಸ್ (ತೆಲಂಗಾಣ ರಾಷ್ಟ್ರಸಮಿತಿ) ಒಂದು ಕುಟುಂಬದ ಪಕ್ಷವಾಗಿದ್ದು, ಅಧಿಕಾರದಲ್ಲಿರಲು ಯೋಗ್ಯವಲ್ಲ. ತೆಲಂಗಾಣದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದಿದ್ದಾರೆ.ಕುಟುಂಬ ಆಡಳಿತದಿಂದಾಗಿ ದೇಶದ ಯುವಕರಿಗೆ ರಾಜಕೀಯದಲ್ಲಿ ಅವಕಾಶ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಪರ ಅಲೆ