ದಿಸ್ಪುರ್ : ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದೇಶಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.