ಪಾಟ್ನಾ : ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂದನ್ ಸರ್ಕಾರವು ಬಿಹಾರದ ಸಸಾರಾಮ್ ಮತ್ತು ಷರೀಫ್ ಪಟ್ಟಣಗಳಲ್ಲಿ ಕೋಮು ಗಲಭೆ, ಹಿಂಸಾಚಾರ ತಡೆಗಟ್ಟುವಲ್ಲಿ ವಿಫಲವಾಗಿದೆ. ಮುಂದಿನಬಾರಿ ಇಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಗಲಭೆಕೋರರನ್ನ ತಲೆಕೆಳಗಾಗಿ ನೇತುಹಾಕುವ ಮೂಲಕ ಗಲ್ಲಿಗೇರಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಗುಡುಗಿದ್ದಾರೆ.ಬಿಹಾರದ ನವಾಡ ಜಿಲ್ಲೆಯ ಹಿಸುವಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ಕ್ಕೆ ಬಿಹಾರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಗಲಭೆಕೋರರನ್ನ ತಲೆಕೆಳಗಾಗಿ ಗಲ್ಲಿಗೇರಿಸಲಾಗುತ್ತದೆ