ಚೆನ್ನೈ : ಖಾಸಗಿ ಫೋಟೋಗಳನ್ನು ತೋರಿಸಿ ತಮ್ಮನ್ನು ಬ್ಲಾಕ್ಮೇಲ್ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಿರುವಳ್ಳೂರ್ ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಇರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ, ಒಂದು ಜಾಗದಲ್ಲಿ ಶವ ಹೂತಿಟ್ಟಿರುವುದು ಪತ್ತೆಯಾಗಿದೆ. ಜೊತೆಗೆ ಕೊಲೆಯಾದವನ ಮೊಬೈಲ್ ಕೂಡ ಪೊಲೀಸರಿಗೆ ಸಿಕ್ಕಿದೆ.