ಭೋಪಾಲ್ : ಕೆಲ ನೆರೆಹೊರೆಯವರ ಕಿರುಕುಳ ತಾಳಲಾರದೆ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಾಲಕಿಯು ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ರಾಂಝಿ ಪ್ರದೇಶದ ನಿವಾಸಿಯಾಗಿದ್ದು, ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೆರೆಹೊರೆಯ ಮನೆಯವರು ಬಾಲಕಿಯು ಶಾಲೆಗೆ ಹೋಗುವ ವೇಳೆ ಅವಳ ಚಿತ್ರಗಳನ್ನು ಕ್ಲಿಕ್ಕಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಬಾಲಕಿಯೂ ಪೊಲೀಸರಿಗೆ ದೂರು ನೀಡಲು