ಲಕ್ನೋ : 21 ವರ್ಷದ ಕಾನೂನು ವಿದ್ಯಾರ್ಥಿಯನ್ನು ಕೊಂದು ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಚರಂಡಿಗೆ ಬಿಸಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದ್ದು,ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಜೂನ್ 27ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಯಶ್ ರಸ್ತೋಗಿ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಶವೇಜ್, ಇಮ್ರಾನ್ ಹಾಗೂ ಸಲ್ಮಾನ್ ಎಂಬವರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಯಶ್ ರಸ್ತೋಗಿಯ ಶವ ಶನಿವಾರ ರಾತ್ರಿ ಮೀರತ್ನ ಸಾದಿಕ್ ನಗರದ ಚರಂಡಿಯಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ