ತಿರುವನಂತಪುರಂ : ಕೇಳರದ ಆಡಳಿತಾರೂಢ ಸಿಪಿಐ(ಎಂ)ನ ರಾಜ್ಯ ಪ್ರಧಾನ ಕಚೇರಿಗೆ ಗುರುವಾರ ತಡರಾತ್ರಿ ಬಾಂಬ್ ಎಸೆದು ಸ್ಫೋಟಿಸಲಾಗಿದೆ.ಪಕ್ಷದ ಕಚೇರಿಯ ಮುಖ್ಯ ಗೇಟ್ ಮುಂದೆ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಪಕ್ಷದ ಹಿರಿಯ ನಾಯಕರು ಕಚೇರಿ ಬಳಿ ಧಾವಿಸಿದರು. ದಾಳಿಯ ವೇಳೆ ಹಲವು ಸಿಪಿಐ(ಎಂ) ಮುಖಂಡರು ಪಕ್ಷದ ಕಚೇರಿ ಬಳಿಯ ಅಪಾರ್ಟ್ಮೆಂಟ್ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ. ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಬಾಂಬ್ ಎಸೆದು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ