ಮುಂಬೈ: ಇಂದು ಮಧ್ಯರಾತ್ರಿ ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಸಿದ್ಧತೆ ನಡೆಸಿರುವ ಮುಂಬೈ ಜನತೆಗೆ ಶಾಕ್ ಎದುರಾಗಿದೆ.ಮುಂಬೈಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಬಾಂಬ್ ಸ್ಪೋಟ ನಡೆಸುವುದಾಗಿ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದೆ. ಈ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ನಿನ್ನೆ ಸಂಜೆ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಈ ಹಿನ್ನಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನಗಣ್ಣಿರಿಸಿದ್ದಾರೆ. ಹೊಸ ವರ್ಷಾಚರಣೆಗಾಗಿ ಜನ ಸೇರುವ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ