ಚೆನ್ನೈನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಹಾಕುವುದಾಗಿ ಅಪರಿಚಿತರು ಅನುಮಾನಾಸ್ಪದ ಪಾರ್ಸಲ್ ರವಾನಿಸಿದ್ದಾರೆ. ಬಿಜೆಪಿ ಕಚೇರಿಗೆ ಬಂದ ಅನುಮಾನಾಸ್ಪದ ಪಾರ್ಸಲ್ನಲ್ಲಿ ಗನ್ ಪೌಡರ್ ಮತ್ತು ಬೆದರಿಕೆ ಪತ್ರ ಪತ್ತೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಪಾರ್ಸಲ್ನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಉದ್ದೇಶಪೂರ್ವಕವಾಗಿ ರವಾನಿಸಲಾಗಿದೆಯೋ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು