ರಾಜ್ ಕುಂದ್ರಾಗೆ ಜಾಮೀನು ನೀಡಲಿದೆಯಾ ಬಾಂಬೆ ಹೈಕೋರ್ಟ್?

ಮುಂಬೈ| Ramya kosira| Last Modified ಬುಧವಾರ, 25 ಆಗಸ್ಟ್ 2021 (12:31 IST)
ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಇಂದು(ಬುಧವಾರ) ನಡೆಸಲಿದೆ. ಸೆಷನ್ಸ್ ನ್ಯಾಯಾಲಯವು ಕುಂದ್ರಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ, ಇದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ನಲ್ಲಿ ರಾಜ್ ಕುಂದ್ರಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
> ಕುಂದ್ರಾ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಗಸ್ಟ್ 25ಕ್ಕೆ ಪ್ರತಿಕ್ರಿಯೆ ನೀಡುವಂತೆ ಬಾಂಬೆ ಹೈಕೋರ್ಟ್ ಕಳೆದ ವಾರ ಪೊಲೀಸರಿಗೆ ಸೂಚಿಸಿತ್ತು.> ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ದಾಖಲಿಸಲಾಗಿದೆ.
 ಇದರಲ್ಲಿ ಇನ್ನಷ್ಟು ಓದಿ :