ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದುಕೊಂಡರು.ನಂತರ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಮಾತನಾಡಿದ ರಾಜ್ಯಪಾಲರು, ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಲು ಲಸಿಕೆ ಅವಶ್ಯಕತೆ ಇದೆ.ದೆಹಲಿಯಲ್ಲಿ ಕೋವಿಡ್ ಲಸಿಕೆಯ ಎರಡು ಡೋಸ್ಗಳನ್ನೂ ಪಡೆದಿದ್ದೇನೆ. ಇಂದು ಬೂಸ್ಡರ್ ಡೋಸ್ ಪಡೆದಿದ್ದೇನೆ. ಪ್ರಮಾಣ ಪತ್ರವನ್ನು ನನಗೆ ನೀಡಿದ್ದಾರೆ. ಇಡೀ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ.ರಾಜ್ಯದಲ್ಲಿ