ನವದೆಹಲಿ : ಗಡಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಗಡಿ ವಿಚಾರವನ್ನು ಎರಡು ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು. ಈ ಸಮಸ್ಯೆ ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು. ಅಲ್ಲಿಯವರೆಗೂ ನೀವು ಸುಮ್ಮನಿರಿ ಎಂದು ಇಬ್ಬರು ಸಿಎಂಗಳಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ. ಗಡಿಯಲ್ಲಿ ಶಾಂತಿಯನ್ನು ಸ್ಥಾಪಿಸಬೇಕಿದೆ. ನೀವೆಲ್ಲರೂ