ಪ್ರಧಾನಿ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಲಿದ್ದು, ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದನ್ನು ವಿಪಕ್ಷಗಳು ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನ ಎಂದು ಆರೋಪಿಸಿವೆ. ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿರುವುದರ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ವಿಪಕ್ಷಗಳು ನೂತನ ಸಂಸತ್ ಕಟ್ಟಡ ಉದ್ಘಾಟನೆ ಒಂದು ಮಹತ್ವದ ಸಂದರ್ಭವಾಗಿದೆ. ಆದರೆ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆ ಹಾಗೂ ಹೊಸ ಸಂಸತ್ತನ್ನು ನಿರ್ಮಿಸಿದ ನಿರಂಕುಶ ವಿಧಾನದ