ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಸ್ಪರ್ಧೆಯಿಂದಾಗಿ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆ ಭರ್ಜರಿ ಆಫರ್ ಕೊಟ್ಟಿದೆ. ತಿಂಗಳಿಗೆ 339 ರೂ. ಕೊಟ್ಟು ಪ್ರತಿದಿನ 2 ಜಿಬಿ 3 ಜಿ ಡಾಟಾ ಮತ್ತು ಅನಿಯಮಿತ ಉಚಿತ ಕರೆ ಪಡೆಯಬಹುದಾಗಿದೆ. ರಿಲಯನ್ಸ್ ಜಿಯೋಗೆ ಸಡ್ಡು ಹೊಡೆಯಲು ಬಿಎಸ್ಎನ್ಎಲ್ ಇಂತಹದ್ದೊಂದು ಭರ್ಜರಿ ಆಫರ್ ಕೊಟ್ಟಿದೆ. 28 ದಿನಗಳ ವ್ಯಾಲಿಡಿಟಿ ಈ ಪ್ಲ್ಯಾನ್ ನಲ್ಲಿ ಪಡೆಯಬಹುದಾಗಿದೆ. ರಿಲಯನ್ಸ್ ಜಿಯೋ ಈಗ ಪ್ರತಿ