ನವದೆಹಲಿ : ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಹರಡುವ ಭೀತಿ ಇರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ನಿರ್ಬಂಧ ವಿಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ಓಮಿಕ್ರಾನ್ ಪೀಡಿತ ದೇಶಗಳಿಂದ ಆಗಮಿಸುವ ವಿಮಾನಗಳಿಗೆ ಹಲವು ದೇಶಗಳು ನಿರ್ಬಂಧ ವಿಧಿಸಿವೆ. ಆದರೆ ನಮ್ಮಲ್ಲಿ ಏಕೆ ವಿಳಂಬವಾಗುತ್ತಿದೆ. ಹೊಸ ತಳಿ ಹರಡುವಿಕೆ ನಿಯಂತ್ರಣಕ್ಕಾಗಿ ಇಸ್ರೇಲ್, ಜಪಾನ್ ದೇಶಗಳು