ನವದೆಹಲಿ(ಆ.12): ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಟ್ವಿಟರ್ ಈಗ ಕಾಂಗ್ರೆಸ್ ಗುರಿಯಾಗಿದೆ. ಹೌದು ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸಂತ್ರಸ್ತೆಯ ಕುಟುಂಬದ ಸದಸ್ಯರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ರಾಹುಲ್ ಗಾಂಧಿ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿತ್ತು. ಇದರ ಬೆನ್ನಲ್ಲೇ ಈಗ ಇನ್ನೂ ಐವರು ಪ್ರಮುಖ ನಾಯಕರ ಖಾತೆಗಳನ್ನು ಅಮಾನತುಗೊಳಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ಸಿಗರು ಈ ಬಗ್ಗೆ ತಮ್ಮ ಕೋಪ ಹೊರಹಾಕಲಾರಂಭಿಸಿದ್ದಾರೆ. ಅಲ್ಲದೇ ಟ್ವಿಟರ್ನ್ನು ಉತ್ತರ ಕೊರಿಯಾದ