ನವದೆಹಲಿ: ವಾಯುಮಾಲಿನ್ಯ ತಡೆಗಟ್ಟಲು ದೀಪಾವಳಿಯಲ್ಲಿ ಪಟಾಕಿ ಹೊಡೆಯಲು ಸುಪ್ರೀಂಕೋರ್ಟ್ ಸಮಯ ನಿಗದಿಪಡಿಸಿದ್ದರೂ ಅದನ್ನು ಉಲ್ಲಂಘಿಸಿದವರ ವಿರುದ್ಧ ತಮಿಳುನಾಡಿನಲ್ಲಿ ಪ್ರಕರಣ ದಾಖಲಿಸಲಾಗಿದೆ.ದೀಪಾವಳಿಯಂದು ಪ್ರತಿನಿತ್ಯ ಸಂಜೆ 8 ಗಂಟೆಯಿಂದ 12 ಗಂಟೆಯೊಳಗೆ ಮಾತ್ರ ಪಟಾಕಿ ಹೊಡೆಯಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅಲ್ಲದೆ, ಈ ನಿಯಮವನ್ನು ಪಾಲಿಸುವಂತೆ ನೋಡಿಕೊಳ್ಳುವ ಅಧಿಕಾರ ಸ್ಥಳೀಯ ಪೊಲೀಸ್ ಠಾಣೆಗಳದ್ದು ಎಂದು ತೀರ್ಪು ನೀಡಿತ್ತು.ಸುಪ್ರೀಂಕೋರ್ಟ್ ಆದೇಶವನ್ನು ತಮಿಳುನಾಡು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಹೀಗಾಗಿ ಪಟಾಕಿ ಹೊಡೆಯುವ ಸಮಯ ನಿಗದಿ ಮಾಡಿತ್ತು.