ಹಿರಿಯ ಕಾಂಗ್ರೆಸ್ ನಾಯಕಿ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಕೇಂದ್ರದ ಪರಿಸರ ಖಾತೆ ಸಚಿವೆಯಾಗಿದ್ದಾಗ ಯೋಜನೆಗಳಿಗೆ ಕಾನೂನುಬಾಹಿರವಾಗಿ ಅನುಮತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇಂದು ಚೆನ್ನೈನಲ್ಲಿರುವ ಜಯಂತಿ ನಿವಾಸದ ಮೇಲೆ ಏಕಾಏಕಿ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಾಯಕರ ನಿವಾಸಗಳ